ಚಿಕ್ಕಮಗಳೂರು: ಬಸ್ಸಿನ ಸ್ಟೇರಿಂಗ್ ಕಟ್ ಆಗಿ ಉಂಟಾದಂತ ಪಲ್ಟಿಯಲ್ಲಿ ಐವರು ಗಂಭೀರವಾಗಿ ಗಾಯಗೊಂಡು, ಇತರರಿಗೆ ಸಣ್ಣಪುಟ್ಟ ಗಾಯವಾಗಿರುವಂತ ಘಟನೆ ಚಿಕ್ಕಮಗಳೂರಿನ ಬಿದರಹಳ್ಳಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಿದರಹಳ್ಳಿಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯ ಸಿಬ್ಬಂದಿ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಪ್ರವಾಸಕ್ಕೆ ತೆರಳಿದ್ದಾಗ, ಬಸ್ ಸ್ಟೇರಿಂಗ್ ಕಟ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಐವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಇನ್ನೂ ಸಣ್ಣಪುಟ್ಟ ಗಾಯವಾಗಿದ್ದಂತ ಇತರರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹಿಣಿಯರೇ ಎಚ್ಚರ..! ಈ ಪದಾರ್ಥಗಳನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬಬೇಡಿ, ಹಾಗೆ ಮಾಡಿದ್ರೆ ಅಪಾಯ | Mixi effect