ಬೆಂಗಳೂರು: ರಾಜ್ಯದಲ್ಲಿ ಗಣೇಶ ಹಬ್ಬದ ದಿನವೇ ವಿವಿಧೆಡೆ ಭೀಕರ ಅಪಘಾತಗಳು ಸಂಭವಿಸಿ, ಐವರು ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಭೈರಾಪುರ ಗೇಟ್ ಬಳಿಯಲ್ಲಿ ಇಂದು ಟಾಟಾ ಏಸ್ ಪಲ್ಟಿಯಾದ ಪರಿಣಾಮ, ಶ್ರೀಧರ್ (20) ಹಾಗೂ ಧನುಷ್ (20) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯನ್ನು ತರೋದಕ್ಕೆ 9 ಯುವಕರು ಟಾಟಾ ಏಸ್ ನಲ್ಲಿ ತೆರಳಿದ್ದರು. ಈ ವೇಳೆಯಲ್ಲಿ ಭೈರಾಪುರ ಗೇಟ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಶ್ರೀಧರ್ ಹಾಗೂ ಧನುಷ್ ಸಾವನ್ನಪ್ಪಿದ್ದಾರೆ. ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇನ್ನೂ ಬೆಂಗಳೂರಿನಲ್ಲಿ ಕಾರು ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಆಟೋ ಚಾಲಕ ಕಿರಣ್(32) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಮೀನಗಡ ಹೊರವಲಯದಲ್ಲಿ ನಿಂತಿದ್ದ ಟ್ರಾಕ್ಟರ್ ಗೆ ಬೈಕ್ ಹಿಂಬದಿಯಾಗಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಶರಣಬಸಯ್ಯ ಬೆನಕನಾಳಮಠ(16) ಹಾಗೂ ಅಮರೇಶ್ ಬಸಯ್ಯ ಬೆನಕನಾಳಮಠ(21) ಎಂಬುದಾಗಿ ಗುರುತಿಸಲಾಗಿದೆ.
ಮಹದಾಯಿಗೆ ಅನುಮತಿ, ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ: ಪ್ರಹ್ಲಾದ್ ಜೋಶಿಗೆ ಡಿಸಿಎಂ ಡಿಕೆಶಿ ಮನವಿ
ಪ್ರಯಾಣಿಕರೇ ದಯವಿಟ್ಟು ಗಮನಿಸಿ : ಇನ್ಮುಂದೆ ಈ ವಯಸ್ಸಿನ ಮಕ್ಕಳು ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು!