ಬೆಳಗಾವಿ: ಮನೆಯಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲೇ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿನ ಜನತಾ ಕಾಲೋನಿಯಲ್ಲಿ ಇಂದು ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಈ ಘೋರ ದುರಂತದಲ್ಲಿ ಮನೆ ಮಾಲೀಕ ರಘುನಾಥ ಮಾದರ(35), ಮಷನವ್ವ ಕಾಂಬಳೆ(55), ನಾಗರಾಜ್ ಕೋಲಕಾರ (30), ಮನುಷಾ ಕಾಂಬಳೆ(26) ಹಾಗೂ ಪ್ರಕೃತಿ(2), ನಿಲಜೀಕರ್(9) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗ್ಯಾಸ್ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಗಾಯಗೊಂಡಿರುವಂತ ಗಾಯಾಳುಗಳ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯುನಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಕೆಲವರ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ.
ದೆಹಲಿಯ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಸಚಿವ ಸ್ಥಾನ? ಇಲ್ಲಿದೆ ಪಟ್ಟಿ