ಬಸ್ತಿ (ಉತ್ತರ ಪ್ರದೇಶ): ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಮುಂಡೇರ್ವಾ ಪ್ರದೇಶದಲ್ಲಿ ನಡೆದಿದೆ.
ಲಕ್ನೋ-ಗೋರಖ್ಪುರ ಹೆದ್ದಾರಿಯಲ್ಲಿ ರಾತ್ರಿ 7:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ತಿಯಲ್ಲಿ NH 28 ರಲ್ಲಿ ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಬಸ್ತಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ.
ಲಖನೌ ಕಡೆಗೆ ಸಂತ ಕಬೀರ್ ನಗರಕ್ಕೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಕಂಟೈನರ್ ಟ್ರಕ್ಗೆ ಡಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಹೊರ ತೆಗೆದಿದ್ದಾರೆ. ಕಾರು ಟ್ರಕ್ನಲ್ಲಿ ಸಿಲುಕಿಕೊಂಡಿದೆ. ಎಲ್ಲಾ ಶವಗಳನ್ನು ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
BREAKING NEWS : ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್ಗೆ ಬಂದಿಳಿದ ಪ್ರಧಾನಿ ಮೋದಿ | PM Modi in Kargil