ಇಂಫಾಲ್: ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇಲೆ ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ .
ಎಲ್ಲ ಬಂಧನಗಳನ್ನು ಸೋಮವಾರ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಸಕ್ರಿಯ ಕಾರ್ಯಕರ್ತನನ್ನು ಜಿಲ್ಲೆಯ ಮೈಟಿ ಲಮ್ಖೈ ಚಾಜಿಂಗ್ ಪ್ರದೇಶದಿಂದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಉಗ್ರ ಜಿರಿಬಾಮ್ ಜಿಲ್ಲೆಯವನು ಎಂದು ಅಧಿಕಾರಿ ತಿಳಿಸಿದ್ದಾರೆ.
ಸುಲಿಗೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಪಿಡಬ್ಲ್ಯೂಜಿ) ಮಹಿಳಾ ಸದಸ್ಯೆಯನ್ನು ವಹೆಂಗ್ಖುಮಾನ್ ಮಾನಿಂಗ್ ಲೀಕೈ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಷೇಧಿತ ಕೆಸಿಪಿ (ಪಿಡಬ್ಲ್ಯೂಜಿ) ಯ ಮೂವರು ಕಾರ್ಯಕರ್ತರನ್ನು ಸಗೋಲ್ಬಂದ್ ತಿಂಗೊಮ್ ಲೀಕೈ ಪ್ರದೇಶದ ಬಾಡಿಗೆ ಮನೆಯಿಂದ ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದರು.
ಇದಲ್ಲದೆ, ಅಪಹರಣ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ.