ಚಿಕ್ಕಬಳ್ಳಾಪುರ: ಗಾಂಜಾ ಸಾಗಿಸುತ್ತಿದ್ದಂತ ತಂದೆ, ಮಗಳು ಹಾಗೂ ಮೊಮ್ಮಗ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿಂತಾಮಣಿಯ ಕುರಟಹಳ್ಳಿ ಕ್ರಾಸ್ ನಲ್ಲಿ ಗಾಂಜಾ ಸಾಗಿಸುತ್ತಿದ್ದಂತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರೊಂದನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆಯಲ್ಲಿ 17.50 ಲಕ್ಷ ಮೌಲ್ಯದ 35 ಕೆಜಿ ಗಾಂಜಾ ಪತ್ತೆಯಾಗಿದೆ. ಪತ್ತೆಯಾದಂತ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಇನ್ನೂ ಕಾರಿನಲ್ಲಿ ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದಂತ ತಂದೆ, ಮಗಳು, ಮೊಮ್ಮಗ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂದಿತ ಆರೋಪಿಗಳನ್ನು ಬಾಗೇಪಲ್ಲಿಯ ಗರಿಗರೆಡ್ಡಿ ಪಾಳ್ಯದ ತಾಯಿ ದೇವಮ್ಮ, ಮಗ ಆಂಜಿ ಹಾಗೂ ಪಲ್ಲಿಕುಂಟೆ ನಿವಾಸಿ ತಂದೆ ಮಾರಪ್ಪ, ವೆಂಕಟರಮಣ, ಆದಿನಾರಾಯಣ ಎಂಬುದಾಗಿ ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದಂತ ಕಾರು ಸೀಜ್ ಮಾಡಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 3 ತಿಂಗಳ ಹೆಚ್ಚುವರಿ ಅಕ್ಕಿ ಹಣ ಖಾತೆಗೆ ಜಮಾ
BREAKING:ಪರ್ವೇಶ್ ವರ್ಮಾ ದೆಹಲಿ ಸಿಎಂ ಆಗ್ತಾರಾ? ಬಿಜೆಪಿ ಅಭ್ಯರ್ಥಿ ಯಾರು | Delhi CM Announcement
BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ