ರಾಮನಗರ: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ (19) ಎಂದು ಗುರುತಿಸಲಾಗಿದೆ. ಇನ್ನುಳಿದ 7ಮಂದಿ ವಿದ್ಯಾರ್ಥಿಗಳು ಪಾರಾಗಿದ್ದಾರೆ
ಮೃತರು ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಂಥ ತಿಳಿದು ಬಂಧಿದ್ದು, ಇಂದು ಮಧ್ಯಾಹ್ನ ನೀರಿನಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾತನೂರು ಪೊಲೀಸರು ಭೇಟಿ ನೀಡಿ ಪ್ರಕರಣವನ್ನುದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಬಂಧ ಎಲ್ಲಾ ಐವರ ಮೃತ ದೇಹವನ್ನು ಮರೋಣತ್ತರ ಪರಿಕೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.