ರಾಮನಗರ: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಂತ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ನಾಪತ್ತೆಯಾಗಿರುವಂತ ಐವರು ವಿದ್ಯಾರ್ಥಿಗಳು ಬೆಂಗಳೂರಿನ ಖಾಸಗೀ ಕಾಲೇಜಿನ ವಿದ್ಯಾರ್ಥಿಗಳು ಎಂಬುದಾಗಿ ತಿಳಿದು ಬಂದಿದೆ. ಅವರು ನೀರುಪಾಲಾಗಿ, ಸಾವನ್ನಪ್ಪಿದಾಗಿ ತಿಳಿದು ಬಂದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಂತ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದಾಗಿ ಘಟನೆ ನಡೆದಿತ್ತು.
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಂತ ಮೂವರು ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಕನಕಪುರ ಗ್ರಾಮಾಂತರ ಠಾಣೆಯ ಪೊಲೀಸರು ದೌಡಾಯಿಸಿದ್ದು, ನಾಪತ್ತೆಯಾಗಿರೋ ವಿದ್ಯಾರ್ಥಿಗಳ ಪತ್ತೆಗೆ ಕ್ರಮವಹಿಸಿದ್ದರು.
ವಿದ್ಯಾರ್ಥಿಗಳು ಕಾವೇರಿ ನದಿಯ ಸಮೀಪದಲ್ಲಿ ಶವವಾಗಿ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಅವರ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಹೊರತೆಗೆದಿದ್ದಾರೆ.