ಬೆಂಗಳೂರು: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿಗಳ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್ಎಸ್ ಅಧಿಕಾರಿ ಚಕ್ರಪಾಣಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.
ಇಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಮಲೆಮಹದೇಶ್ವರ ವನ್ಯಧಾಮದಲ್ಲಿ ಹುಲಿಗಳ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್ಎಸ್ ಅಧಿಕಾರಿ ಚಕ್ರಪಾಣಿ ಅವರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ಡಿಸಿಎಫ್ ಆಗಿ ಚಕ್ರಪಾಣಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಡಿಸಿಎಫ್ ಚಕ್ರಪಾಣಿಯನ್ನು ಕರ್ತವ್ಯಲೋಪ ಕಂಡು ಬಂದ ಹಿನ್ನಲೆಯಲ್ಲಿ ಕಡ್ಡಾಯ ರಜೆ ಮೇಲೆ ರಾಜ್ಯ ಸರ್ಕಾರ ಕಳುಹಿಸಿತ್ತು. ಇದೀಗ ಐಎಫ್ಎಸ್ ಅಧಿಕಾರಿ ಚಕ್ರಪಾಣಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.