ರಾಯಚೂರು: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಮಾನವಿ ತಾಲೂಕಿನ ಕೋಳಿ ಕ್ಯಾಂಪ್ನಲ್ಲಿ ಈ ವೈರಸ್ ಪತ್ತೆಯಾಗಿದೆ.
BIGG NEWS : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ : ಶೀಘ್ರವೇ ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆ
ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಾಗರಾಜ ಅವರ ಪುತ್ರಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ.ಕೆಲ ದಿನಗಳ ಹಿಂದೆ ಬಾಲಕಿಗೆ ಜ್ವರ, ನೆಗಡಿ ಕೆಮ್ಮು, ಸೇರಿದಂತೆ ಅನಾರೋಗ್ಯ ಉಂಟಾಗಿತ್ತು. ಈ ವೇಳೆ, ಪೋಷಕರು ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆಗಾಗಿ ತೋರಿಸಿದ್ದರು. ಅಲ್ಲಿನ ವೈದ್ಯರು ಸಿಂಧನೂರಿಗೆ ಚಿಕಿತ್ಸೆಗೆ ತೆರಳುವಂತೆ ಹೇಳಿದ್ದರು. ಈ ವೇಳೆ, ಬಾಲಕಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದ್ದು, ಡೆಂಗ್ಯೂ ಮಾದರಿಯ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ.