ಬೆಂಗಳೂರು : ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹರಿದು ಹಾಕಿ ವಿಚಾರ ಮಾಧ್ಯಮಗಳೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿ, ʻಫ್ಲೆಕ್ಸ್ ಹಾಕೋರು ಅನುಮತಿ ಪಡೆದು ಹಾಕಬೇಕುʼ ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯೋ ಅವಶ್ಯಕತೆ ಇಲ್ಲ ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ
ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹರಿದು ಹಾಕಿ ವಿಚಾರ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಫ್ಲೆಕ್ಸ್ ಹರಿದು ಹಾಕುವುದು ಒಳ್ಳೆಯ ಸಂಸ್ಕೃತಿಯಲ್ಲ. ಚುಚ್ಚಿದರು ಗುಂಡುಕ್ಕಿದರೂ ಕಾಂಗ್ರೆಸ್ಸಿಗರು ಹೆದರಲ್ಲ. ನಾನು ಮನಸ್ಸು ಮಾಡಿದ್ರೆ ಅವರು ಎಲ್ಲೂ ಕಾರ್ಯಕ್ರಮ ಪ್ಲೇಕ್ಸ್ ಹಾಕೋದಕ್ಕೆ ಆಗಲ್ಲ. ಸಿಎಂ ಮತ್ತು ಅವರ ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದರು.
BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಸೆ.30 ರಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಹರಿದುಹಾಕಿದ್ದಾರೆ.
ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ ಹೋಟೆಲ್ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್ಗಳಿಗೆ ಕಿಡಿಗೇಡಿಗಳು ಬ್ಲೇಡ್ ಹೊಡೆದಿದ್ದಾರೆ. ಎಐಸಿಸಿ ನಾಯಕ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಚಾಮರಾಜನಗರ ಶಾಸಕ ಸಿ ಪುಟ್ಟರಂಗಶೆಟ್ಟಿ ಭಾವಚಿತ್ರಗಳಿರುವ ಫ್ಲೆಕ್ಸ್ ಅನ್ನು ಹರಿದು ಹಾಕಲಾಗಿದೆ.
BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ