ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದಿನಿಂದ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭಗೊಳ್ಳಲಿದೆ. ಟಿಕೆಟ್ ದರ ಎಷ್ಟು ಎನ್ನುವ ಬಗ್ಗೆ ಮುಂದೆ ಓದಿ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ನಡೆಯಲಿದೆ.
ಲಾಲ್ಬಾಗ್ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್ಲೈನ್ ಬುಕ್ಕಿಂಗ್ ಪಡೆದುಕೊಳ್ಳುವ ಸೌಲಭ್ಯ ಇದೆ. ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.
ಇಂದಿನಿಂದ ಆರಂಭಗೊಳ್ಳುತ್ತಿರುವಂತ ಲಾಲ್ ಬಾಗ್ ಪ್ಲವರ್ ಶೋ ಬೆಳಿಗ್ಗೆ 6 ಗಂಟೆಯಿಂದ ಆರಂಭಗೊಂಡು ಸಂಜೆ 6.30ರವರೆಗೆ ತೆರೆದಿರಲಿದೆ. ಸಾರ್ವಜನಿಕರು ಲಾಲ್ ಬಾಗ್ ಪ್ಲವರ್ ಶೋಗೆ ಭೇಟಿ ನೀಡಿ, ಬಗೆ ಬಗೆಯ ಹೂವುಗಳ ಪ್ರದರ್ಶನವನ್ನು ಕಣ್ ತುಂಬಿಕೊಳ್ಳಬಹುದಾಗಿದೆ.