ಬೆಂಗಳೂರು: ಸಾಮ್ಯಾನವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಗುಡುಗು-ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮ್ಯಾನವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಕೊಳ್ಳುವ ಮೂಲಕ ಸಿಡಿಲಿನಿಂದ ರಕ್ಷಿಸಿಕೊಳ್ಳಬಹುದಾಗಿದೆ.
ಗುಡುಗು-ಸಿಡಿಲಿ ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು:
* ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting protocol (CAP) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು.
* ಪ್ರತಿಕೂಲ ಹವಾÀಮಾನ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮ್ಯಾನ ಪ್ರಯಾಣಕ್ಕಾಗಿ ಹೊರಗೆ ಹೋಗದಿರುವುದು.
* ಗುಡುಗು-ಸಿಡಿಲಿ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ,ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.
* ಬೆಟ್ಟಗಳು,ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.
* ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು.
* ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.
* ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು.
* ಗುಡುಗು-ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.
* ಗುಡುಗು-ಸಿಡಿಲಿನ ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.
* ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಇವು ಸಿಡಿಲನ್ನು ಆಕರ್ಷಿಸುತ್ತವೆ.
* ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.
* ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿಬೇಲಿ,ಯAತ್ರಗಳು ಇತ್ಯಾದಿಗಳಿಂದ ದೂರವಿರುವುದು.
* ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ಗಳನ್ನು ಬಳಸಬಾರದು.
* ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.
* ಗುಡುಗು- ಸಿಡಿಲಿ ಸಮಯದಲ್ಲಿ ಕಿಟಕಿ, ಬಾಗಿಲುಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿAದ ದೂರವಿರುವುದು.
* ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.
* ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೇ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.
* ಸಿಡಿಲು ಸಂದರ್ಭದಲ್ಲಿ ಕಟ್ಟದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲಿ ಉಂಟಾಗುವ ಸಂದರ್ಭದಲ್ಲಿ ಸಾನ್ನ ಅಥವಾ ಶವರ್ ತೆಗೆದುಕೊಳ್ಳವಾರದು ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.
* ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.
* ಗುಡುಗು -ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು.
* ಗುಡುಗು -ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರ ಯಾವುದೇ ತೆರದ ವಾಹನಗಳ ಸಂಚಾರವನ್ನು ಮಾಡದಿರುವುದು.
* ಆಟದ ಮೈದಾನ,ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.
* ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.
* ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು.
* ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡ ಗಡ್ಡೆಗಳಿಲ್ಲದ ಸ್ವಚ್ಛಪ್ರದೇಶದ ಕಡೆಗೆ ಚಲಿಸುವುದು.
ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್
GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ