Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಸಿಡಿಲಬ್ಬರಕ್ಕೆ ಮೂವರು ಬಲಿ, 2 ದಿನದಲ್ಲಿ ಆರು ಸಾವು!

ತುಮಕೂರಿನಲ್ಲಿ ಇಂದು ರಾಜ್ಯ ಸರ್ಕಾರದ ‘ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮ: : ಇದೇ ಮೊದಲಿಗೆ 1.52 ಲಕ್ಷ ಮಂದಿಗೆ ಹಕ್ಕುಪತ್ರ ವಿತರಣೆ ಗಿನ್ನೆಸ್ ದಾಖಲೆ

GOOD NEWS: ಆಧಾರ್ ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ: ಒಂದು ವರ್ಷ ಉಚಿತ ಅಪ್‌ಡೇಟ್ ಗಡುವು ವಿಸ್ತರಿಸಿದ UIDAI | Aadhar

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು ಹೀಗಿವೆ.!
KARNATAKA

CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು ಹೀಗಿವೆ.!

By kannadanewsnow57

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದೆ.

ಹೀಗಿದೆ ಸಿಎಂ ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು

ಅಬಕಾರಿ ಇಲಾಖೆ:

* ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.

* ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಯಿತು.

ನೋಂದಣಿ ಮತ್ತು ಮುದ್ರಾಂಕ ಇಲಾಖೆ

* ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು.

* ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.

ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.

* ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಗಣಿ ಮತ್ತು ಭೂವಿಜ್ಞಾನ ಇಲಾಖೆ

* ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ.

* ಈ ವರ್ಷದ ಒಟ್ಟು ರಾಜಸ್ವ ಗುರಿ ₹9 ಸಾವಿರ ಕೋಟಿ ಇದ್ದು, ನವೆಂಬರ್ ಅಂತ್ಯದವರೆಗೆ ₹4,862 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ.

* ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ ವಹಿಸಬೇಕು.

* 2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮ ವಹಿಸುವಂತೆ ಸೂಚಿಸಲಾಯಿತು.

* ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

ವಾಣಿಜ್ಯ ಮತ್ತು ತೆರಿಗೆ ಇಲಾಖೆ

* ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದೆ. ಎಲ್ಲಾ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಲು ಸೂಚಿಸಲಾಯಿತು.

* ವಿಜಿಲೆನ್ಸ್ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಅಧಿಕಾರಿಗಳು ಬೆಂಗಳೂರು ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು.

* ವಿಶೇಷ ಅಭಿಯಾನ ಕೈಗೊಂಡು ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ತೆರಿಗೆ ಸ೦ಗ್ರಹವನ್ನು ಹೆಚ್ಚಿಸಿ ಶೇ.100ರಷ್ಟು ಬಜೆಟ್ ಗುರಿಯನ್ನು ಸಾಧಿಸಬೇಕು.

• ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು.

* ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇ.15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ₹13,722 ಕೋಟಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.

CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು ಹೀಗಿವೆ.! Following are the highlights of the progress review meeting of various departments chaired by CM Siddaramaiah.
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಸಿಡಿಲಬ್ಬರಕ್ಕೆ ಮೂವರು ಬಲಿ, 2 ದಿನದಲ್ಲಿ ಆರು ಸಾವು!

1 Min Read

ತುಮಕೂರಿನಲ್ಲಿ ಇಂದು ರಾಜ್ಯ ಸರ್ಕಾರದ ‘ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮ: : ಇದೇ ಮೊದಲಿಗೆ 1.52 ಲಕ್ಷ ಮಂದಿಗೆ ಹಕ್ಕುಪತ್ರ ವಿತರಣೆ ಗಿನ್ನೆಸ್ ದಾಖಲೆ

2 Mins Read

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

1 Min Read
Recent News

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಸಿಡಿಲಬ್ಬರಕ್ಕೆ ಮೂವರು ಬಲಿ, 2 ದಿನದಲ್ಲಿ ಆರು ಸಾವು!

ತುಮಕೂರಿನಲ್ಲಿ ಇಂದು ರಾಜ್ಯ ಸರ್ಕಾರದ ‘ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮ: : ಇದೇ ಮೊದಲಿಗೆ 1.52 ಲಕ್ಷ ಮಂದಿಗೆ ಹಕ್ಕುಪತ್ರ ವಿತರಣೆ ಗಿನ್ನೆಸ್ ದಾಖಲೆ

GOOD NEWS: ಆಧಾರ್ ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ: ಒಂದು ವರ್ಷ ಉಚಿತ ಅಪ್‌ಡೇಟ್ ಗಡುವು ವಿಸ್ತರಿಸಿದ UIDAI | Aadhar

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

State News
KARNATAKA

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಸಿಡಿಲಬ್ಬರಕ್ಕೆ ಮೂವರು ಬಲಿ, 2 ದಿನದಲ್ಲಿ ಆರು ಸಾವು!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆಯ ಆರ್ಭಟ ತೀವ್ರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 13…

ತುಮಕೂರಿನಲ್ಲಿ ಇಂದು ರಾಜ್ಯ ಸರ್ಕಾರದ ‘ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮ: : ಇದೇ ಮೊದಲಿಗೆ 1.52 ಲಕ್ಷ ಮಂದಿಗೆ ಹಕ್ಕುಪತ್ರ ವಿತರಣೆ ಗಿನ್ನೆಸ್ ದಾಖಲೆ

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.