ಕೊಡಗು: ಆಹಾರ ಸರಬರಾಜು ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಂತ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ಉಪ ನಿರ್ದೇಶಕರಾಗಿ ಶ್ರೀಧರ್ ಮೂರ್ತಿ ಎಂಬುವರು ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಕಚೇರಿಗೆ ಬಂದಿದ್ದಂತ ಅವರಿಗೆ ಎದೆನೋವಿನಿಂದ ದಿಢೀರ್ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಶ್ರೀಧರ್ ಮೂರ್ತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ಮೃತ ಶ್ರೀಧರ್ ಮೂರ್ತಿ 28 ದಿನಗಳ ಹಿಂದೆಯಷ್ಟೇ ಕೊಡಗಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಲ್ಲದೇ ಕೆಲ ದಿನಗಳಲ್ಲೇ ಅವರು ನಿವೃತ್ತರಾಗಲಿದ್ದರು. ಇದೀಗ ಮೂಲತಃ ಚಿತ್ರದುರ್ಗ ಜಿಲ್ಲೆಯ ಶ್ರೀಧರ್ ಮೂರ್ತಿ ಹೃದಯಾಘಾತದಿಂದ ಕೆಲಸದ ವೇಳೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
BREAKING: ಮದುವೆ ಕ್ಯಾನ್ಸಲ್ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ