ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ತರಬೇತಿಯನ್ನು ಆಯೋಜಿಸಲಾಗಿದೆ.
ನವೆಂಬರ್ 5, 6 ಮತ್ತು 29,30 ರಂದು ಆಧುನಿಕ ಹೈನುಗಾರಿಕೆ ತರಬೇತಿ, ನ.11 ಮತ್ತು 12 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ, ನ.15 ಮತ್ತು 16 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ನೀಡಲಾಗುವುದು.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಲ್ಲಿ ಪ್ಲಾಸ್ಟಿಕ್ ಗೋಡನ್, ಮಳಿಗೆಗಳ ಮೇಲೆ BBMP ಅಧಿಕಾರಿಗಳು ದಾಳಿ: 1.40 ಲಕ್ಷ ದಂಡ
ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates