ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನ.22 ರ ಮಧ್ಯರಾತ್ರಿ 12 ಗಂಟೆಯಿAದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಸಂಡೂರು ವಿಧಾನಸಭೆ ಉಪಚುನಾವಣೆ; ಮತ ಎಣಿಕೆ ದಿನದಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಡಿಸಿ ಮಿಶ್ರಾ ಆದೇಶ
ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.23 ರಂದು ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬAಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನ.22 ರ ಸಂಜೆ 06 ಗಂಟೆಯಿAದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಮತ ಎಣಿಕೆ ಅಂಗವಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಜಾರಿಗೊಳಿಸಲಾಗಿದೆ.
ಷರತ್ತುಗಳು:
ಇಂಕ್(ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರೆ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತçವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪಧಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಕಾರು, ಮೋಟಾರು ಬೈಕ್ ಮತ್ತು ಇತರೆ ವಾಹನಗಳಲ್ಲಿ ರ‍್ಯಾಲಿ ಆಯೋಜಿಸುವುದು. ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನ ಕೂಟಗಳನ್ನು ಏರ್ಪಡಿಸುವುದು ನಿಷೇಧಿಸಲಾಗಿದೆ.
5 ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿಯ ಪ್ರದರ್ಶನ ಮಾಡುವುದು ನಿಷೇಧಿಸಲಾಗಿದೆ. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನೂ ಚನ್ನಪಟ್ಟಣ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ನವೆಂಬರ್.22ರಿಂದ ನವೆಂಬರ್.24ರ ಬೆಳಿಗ್ಗೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ನೈಸರ್ಗಿಕ ವಿಪತ್ತು ನಿರ್ವಹಣೆ: ಒಡಿಶಾದಲ್ಲಿ ರಿಲಯನ್ಸ್ ಫೌಂಡೇಶನ್ – ಯುಎನ್ ಇಂಡಿಯಾ ಸಭೆ
BREAKING : ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕ್ರಿಕೇಟರ್ ಸೂರ್ಯ ಕುಮಾರ ಯಾದವ್ ಭೇಟಿ, ಪೂಜೆ ಸಲ್ಲಿಕೆ