ಬೆಂಗಳೂರು : ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2024-25 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮ ಶೀಲತಾಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಲಾಗಿದೆ.
ಆಸಕ್ತ ಫಲಾಪೇಕ್ಷಿಗಳು ಗ್ರಾಮ-1, ಕರ್ನಾಟಕ-1, ಸೇವಾ ಸಿಂಧು ಪೋರ್ಟಲ್ನಲ್ಲಿ ಅಗತ್ಯ ದಾಖಲೆಗಳೊಂದಿಗೆ ವೆಬ್ಸೈಟ್ https://sevasindhu.karnataka.gov.in ರ ಮೂಲಕ ಅಕ್ಟೋಬರ್ 10 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-224349 ನ್ನು ಸಂಪರ್ಕಿಸಬಹುದೆAದು ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ಮೂರು ಮುಕ್ಕಾಲು ವರ್ಷ ‘ಸಿದ್ಧರಾಮಯ್ಯ’ ಅವರೇ ಮುಖ್ಯಮಂತ್ರಿ: ಸಚಿವ ಈಶ್ವರ್ ಖಂಡ್ರೆ