ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನ 2000 ರೂ. ಗಳಿಗೆ ಹೆಚ್ಚಳ; ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1,200 ರೂ. ಗಳಿಗೆ ಹೆಚ್ಚಳ ಮಾಡಲಾಗುವುದು ಅಂಥ ತಿಳಿಸಿದರು.
ಕ್ರೀಡಾಪಟುಗಳಿಗೆ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಹುದ್ದೆ ಮೀಸಲು ನೀಡಲಾಗಿದೆ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು . ಇನ್ನೂ ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ (Sports City) ಸ್ಥಾಪನೆ ಹಾಗೂ ನಾಲ್ಕು ಅತ್ಯಾಧುನಿಕ ಕ್ರೀಡ ಸಂಕೀರ್ಣಗಳ ನಿರ್ಮಾಣ.
ರಾಜ್ಯದ ವಿವಿಧ ಕ್ರೀಡಾ ಸಂಘ ಸಂಸ್ಥೆಗಳಿಗೆ 12 ಕೋಟಿ ರೂ. ಅನುದಾನ ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಕ್ರೀಡಾಪಟುಗಳಿಗೆ 06 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 04 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ. ಏಷಿಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಅಂತ ಹೇಳಿದರು .
.