ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2024-25ನೇ ಸಾಲಿನಲ್ಲಿ 6 ನೇ ತರಗತಿ ಪ್ರವೇಶ ಸಂಬಂಧ ಸೇವಾ ಸಿಂಧು ಪೋರ್ಟಲ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31.03.2024 ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ ಹಾಗೂ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಸೇವಾ ಸಿಂಧೂ ಪೋರ್ಟಲ್ ಮೂಲಕ https://sevasindhu.karnataka.gov.in ಅರ್ಜಿ ಸಲ್ಲಿಸಬಹುದು.
ಪ್ರಸ್ತುತ ಅರ್ಜಿ ಸಲ್ಲಿಸಲು ದಿನಾಂಕ: 14.03.2024 ಕೊನೆಯ ದಿನಾಂಕವನ್ನು 31.03.2024 ಕ್ಕೆ ವಿಸ್ತರಿಸಲಾಗಿದ್ದು, ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳು ಈ ವಿಷಯಕ್ಕೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಲು ಹಾಗೂ ವ್ಯಾಪಕ ಪ್ರಚಾರ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ.