ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದ ಕೆಲವು ದಿನಗಳ ನಂತರ, ಕರ್ನಾಟಕ ಪೊಲೀಸರು ಮಂಗಳವಾರ ಕರ್ನಾಟಕದಾದ್ಯಂತ ಸಂಘಟನೆಗೆ ಸಂಬಂಧಿಸಿದ 75 ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ್ದಾರೆ. ಕೋಲಾರ, ಮಂಗಳೂರು, ಚಾಮರಾಜನಗರ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಹಾಸನ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ರಾಮನಗರ ಮತ್ತು ಬೀದರ್ ಸೇರಿದಂತೆ ಇತರ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ 75 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್ ಅವರು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಪಿತೂರಿ ನಡೆಸಿದ ಆರೋಪದ ಮೇಲೆ ದಾಳಿ ನಡೆಸಿ ೪೦ ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಕೋಲಾರ ಜಿಲ್ಲೆಯಲ್ಲಿ 6 ಜನರನ್ನು ಬಂಧಿಸಲಾಗಿದೆ. ಚಾಮರಾಜನಗರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಪಿಎಫ್ಐ ಸದಸ್ಯರ ಬಂಧನವನ್ನು ವಿರೋಧಿಸಿ ಪಿಎಫ್ಐ ಸದಸ್ಯರು ಹಲವಾರು ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸಿದ ಸನ್ನಿವೇಶ ಕಂಡು ಬಂದಿದೆ.
ವಿಜಯಪುರ : ವಿಜಯಪುರ ನಗರದಲ್ಲಿ ಜಿಲ್ಲಾ ಪೊಲೀಸರು ಪಿಎಫ್ಐ ಮುಖ್ಯಸ್ಥನನ್ನು ವಶಕ್ಕೆ ಪಡೆದಿದ್ದಾರೆ. ನಗರದ ಜಿಎಂ ರಸ್ತೆಯಲ್ಲಿರೋ ಅಶ್ಪಾಕ್ ಜಮಖಂಡಿ ಮನೆಯಲ್ಲಿದ್ದ ವೇಳೆ ಆತನನ್ನು ವಶಕ್ಕೆ ಪಡೆಯಲಾಗಿದೆ. ಚಾರಣೆ ಬಳಿಕ ಅವಶ್ಯಕತೆ ಬಿದ್ದರೆ ಅಶ್ಪಾಕ್ ಜಮಖಂಡಿಯನ್ನು ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮುಖಂಡರ ಮನೆ ಮೇಲೆ ದಾಳಿ ನಡೆಸಿ 10 PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮನಗರ : ರಾಮನಗರದಲ್ಲಿ 9 ಜನ, ಚನ್ನಪಟ್ಟಣದಲ್ಲಿ 6 ಜನ ಸೇರಿದಂತೆ 15 ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರ : ಕೋಲಾರದಲ್ಲಿ ನವಾಜ್ ಪಾಷಾ, ವಸೀಂ ಪಾಷಾ, ಸಿದ್ದಿಕ್ ಪಾಷಾ, ಅಲ್ಲಾಭಕ್ಷ್ ಇಂತಿಯಾಜ್ ಪಾಷಾ, ಶಾಬಾಜ್ ಪಾಷಾ ಸೇರಿದಂತೆ 6 ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಶಿವಮೊಗ್ಗ ಜಿಲ್ಲೆಯಲ್ಲಿ ಐವರು ಪಿಎಫ್ಐ ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಪಿಎಫ್ಐ ಮುಖಂಡರ ಮೇಲಿನ ದಾಳಿ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದ ಐವರು ಪಿಎಫ್ಐ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಉಪ ಆಯುಕ್ತ (ಡಿಸಿಪಿ) ರವೀಂದ್ರ ಗಡಾದಿ ನೇತೃತ್ವದಲ್ಲಿ ಇಂದು ಬೆಳ್ಳಂಬೆಳಗ್ಗೆ 4 ಗಂಟೆಗೆ ಪಿಎಫ್ಐ ಮುಖಂಡರ ಪಟ್ಟಿ ಮಾಡಿಕೊಂಡು ದಾಳಿ ನಡೆಸಿದ್ದಾರೆ. ಈ ವೇಳೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ PFI ಜಿಲ್ಲಾಧ್ಯಕ್ಷ ಕಪಿಲ್, ಕಾರ್ಯದರ್ಶಿ ಸುಯೇಬ್ ಸೇರಿ ಇಬ್ಬರು ಪಿಎಫ್ಐ ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ.
ರಾಯಚೂರು : ರಾಯಚೂರಿನಲ್ಲೂ ಮೊಹ್ಮದ್ ಇಸ್ಮಾಯಿಲ್, ಆಸೀಂ ಸೇರಿ ಇಬ್ಬರು PFI ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
BREAKING NEWS: ರಾಜ್ಯಾದ್ಯಂತ PFI ಮುಖಂಡರ ಮನೆಗಳ ಮೇಲೆ ಖಾಕಿ ರಣಬೇಟೆ; ಬಾಗಲಕೋಟೆಯಲ್ಲಿ 7 ಮಂದಿಗೆ ನ್ಯಾಯಾಂಗ ಬಂಧನ
ವಿಧವೆ ಜೊತೆಗೆ ಲವ್ನಲ್ಲಿ ಬಿದ್ದ: ಅವಳು ನನ್ನ ಮಾತು ಕೇಳ್ತಿಲ್ಲ ಅಂತ ಹೇಳಿ ನೇಣಿಗೆ ಶರಣಾದ