ಬೆಂಗಳೂರು: ಇದೇ ಮೊದಲ ಬಾರಿಗೆ ದೈಹಿಕ ಶಿಕ್ಷಕರಿಗೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲು ಸೂಚಿಸಲಾಗಿತ್ತು. ಮುಂದುವರೆದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-29ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ದಿನಾಂಕ: 03-02-2025ರಂದು ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಅಯೋಜಿಸುವಾಗ ಈ ಕೆಳಕಂಡಂತೆ ಸೇರ್ಪಡೆ ಮಾಡಿಕೊಂಡು ಕ್ರೀಡಾಕೂಟವನ್ನು ಆಯೋಜಿಸಲು ಸೂಚಿಸಿದ್ದಾರೆ.
ದೈಹಿಕ ಶಿಕ್ಷಕರನ್ನು ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವನ್ನು ಕಲ್ಪಿಸುವುದು. ಪೋಲಿಸ್ (ಸಮವಸ್ತ್ರದಾರಿಗಳಿಗೆ ಹಾಗೂ, ಕ್ರೀಡಾ ಮೀಸಲಾತಿಯಡಿ ಆಯ್ಕೆಯಿಂದ ಎಲ್ಲಾ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ ಎಂದಿದ್ದಾರೆ.
ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗಳ ಬ್ಯಾಜ್ ನಂಬರ್ ಸಿಬ್ಬಂದಿಗಳು( ಕ್ರೀಡಾ ಮೀಸಲಾತಿಯಡಿ ಆಯ್ಕೆಯಾದ ನೌಕರೆರನ್ನು ಹೊರತುಪಡಿಸಿ) ಹಾಗೂ ಲಿಪಿಕ ಸಿಬ್ಬಂದಿಗಳು ಸಹ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ತಿಳಿಸಿದ್ದಾರೆ.
BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ