ಮಡಿಕೇರಿ :-ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್, 05 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://bcwd.karnataka.gov.in/ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ರೂ. 8 ಲಕ್ಷ ಆಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗೆ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.
‘ಬಗರ್ ಹುಕುಂ’ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿದ್ದ ರೈತರಿಗೆ ಗುಡ್ ನ್ಯೂಸ್: ‘ಕಡತ ಪರಿಶೀಲನೆ’ ಆರಂಭ
BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!