ಬೆಂಗಳೂರು: ಎಂಜಿನಿಯರಿಂಗ್ ಕೋರ್ಸುಗಳಿಗೆ ( Engineering Course ) ಪ್ರವೇಶಾವಕಾಶದ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ( Supreme Court ) ನವೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ತಿಳಿಸಿದ್ದಾರೆ.
ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority – KEA ) ಈ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ನ ಮೊರೆ ಹೋಗಿತ್ತು. ಈ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ ಎಂದು ಅವರು ಹೇಳಿದ್ದಾರೆ.
ಹೀಗಾಗಿ ನಮಗೆ ಒಂದು ತಿಂಗಳಿಗಿಂತ ಹೆಚ್ಚು ಕಾಲಾವಕಾಶ ಸಿಕ್ಕಿದೆ. ಇಷ್ಟರಲ್ಲಿ ನಾವು ಸುಗಮ ಕೌನ್ಸೆಲಿಂಗ್ ಸೇರಿದಂತೆ ಪ್ರವೇಶ ಪ್ರಕ್ರಿಯೆ ಮುಗಿಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ ಪಿಯುಸಿ ( PUC ) ಪಾಸಾದ 24 ಸಾವಿರ ಅಭ್ಯರ್ಥಿಗಳು ಈ ವರ್ಷ ಸಿಇಟಿ ಬರೆದು, ರ್ಯಾಂಕಿಂಗ್ ( Ranking ) ನೀಡುವ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಸ್ವಲ್ಪ ಅಡಚಣೆ ಎದುರಾಯಿತು. ಹೀಗಾಗಿ ಅಂತಿಮ ದಿನಾಂಕ ವಿಸ್ತರಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಕೇಳಿಕೊಂಡಿದ್ದೆವು ಎಂದು ಅವರು ವಿವರಿಸಿದ್ದಾರೆ.
OMG.! ಈ ಸತ್ತ ಕೀಟ, ಮೆದುಳಿನ ಮೇಲೆ ನಿಯಂತ್ರಣ ಸಾಧಿಸಿ ನಡೆಯುತ್ತಿದೆ ಗೊತ್ತಾ.?