ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಕೆಲವೆಡೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದಾಖಲೆ, ಹಣ ಜಪ್ತಿ ಮಾಡಿದ್ರೇ, ಮತ್ತೆ ಕೆಲವೆಡೆ ಒಡವೆ ವಸ್ತುಗಳನ್ನು ಸೀಜ್ ಮಾಡಿದ್ದಾರೆ. ಇದರ ನಡುವೆ ಗ್ರಾಮ ಪಂಚಾಯ್ತಿ ಸದಸ್ಯನ ಮನೆಯಲ್ಲಿ ಫಾರಿನ್ ಬ್ರ್ಯಾಂಡ್ ಎಣ್ಣೆ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಇಂದು ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.
ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ ಸೀಗೇನಹಳ್ಳಿ ಮನೆಯ ಮೇಲೆ ದಾಳಿ ನಡೆಸಲಾಯಿತು. ಈ ದಾಳಿಯ ವೇಳೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ನಿವಾಸದಲ್ಲಿ 500 ರೂ ಕಂತೆ ಕಂತೆ ನೋಟುಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ.
ಇನ್ನೂ ಇದಷ್ಟೇ ಅಲ್ಲದೇ ಬೆಂಗಳೂರು ದಕ್ಷಿಣ ತಾಲೂಕು ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ಅವರ ನಿವಾಸದಲ್ಲಿ ಪರಿಶೀಲನೆ ವೇಳೆಯಲ್ಲಿ ವಿದೇಶಿ ಬ್ರ್ಯಾಂಡ್ ಗಳ ಮದ್ಯ ಕೂಡ ಪತ್ತೆಯಾಗಿದೆ.
ದುಬಾರಿ ಬೆಲೆಯ ವಿವಿಧ ಬ್ರ್ಯಾಂಡ್ ನ ಮದ್ಯದ ಬಾಟಲಿಗಳು ದೊರೆತಿತ್ತು. ಗ್ರಾಮ ಪಂಚಾಯ್ತಿ ಸದಸ್ಯನ ಮನೆಯಲ್ಲಿ ಸಿಕ್ಕ ಫಾರಿನ್ ಮದ್ಯ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಅವುಗಳನ್ನು ಜಪ್ತಿ ಮಾಡಿ, ತನಿಖೆ ಮುಂದುವರೆಸಿದ್ದಾರೆ.
ಮಲ ಹೊರುವ ಪದ್ಧತಿ ನಿಷೇಧವಿದ್ದರೂ ಜೀವಂತವಾಗಿದೆ:ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
BIG NEWS: ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ | Mohammed Shami