ನವದೆಹಲಿ: ಇನ್ಮುಂದೆ ದೇಶದಲ್ಲಿ 6 ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಪೊರೆನ್ಸಿಕ್ ಪರೀಕ್ಷೆಯನ್ನು ( Forensic examination ) ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂಗ್ರ ಗೃಹ ಸಚಿವ ಅಮಿತ್ ಶಾ ( Union Home Minister Amith Shah ) ಹೇಳಿದ್ದಾರೆ.
ಭಾನುವಾರದಂದು ನ್ಯಾಷನಲ್ ಪೋರೆನ್ಸಿಕ್ ಸೈನ್ಸಸ್ ವಿವಿಯ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಸ್ವಾತಂತ್ರ್ಯ ನಂತ್ರದಲ್ಲಿ ಯಾವುದೇ ಸರ್ಕಾರಗಳು ಕೂಡ ಇಂಡಿಯನ್ ಪೀನಲ್ ಕೋಡ್, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಎವಿಡೆನ್ಸ್ ಆಕ್ಟ್ ಗಳನ್ನು ಭಾರತೀಯರ ದೃಷ್ಠಿಕೋನದಲ್ಲಿ ನೋಡುವ ಯತ್ನ ಮಾಡಲಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು ಈಗ ಈ ಎಲ್ಲಾ ಕಾನೂನನುಗಳನ್ನು ಬದಲಾವಣೆ ಮಾಡಲು ನಿರ್ಧರಿಸಿದೆ. ಇದರ ಭಾಗವಾಗಿ 6 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ವಿಧಿವಿಜ್ಞಾನ ಪರೀಕ್ಷೆಯನ್ನು ಕಡ್ಡಾಯಗೊಳಿಸೋ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.