ಮದ್ದೂರು: ಕರ್ತವ್ಯದ ವೇಳೆಯಲ್ಲೇ ಬ್ರೈನ್ ಸ್ಟ್ರೋಕ್ ಗೆ ಒಳಗಾದಂತ ಅರಣ್ಯ ಇಲಾಖೆಯ ಗುತ್ತಿಗೆ ನೌಕರನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ಮದ್ದೂರಿನ ಕಳ್ಳಬೇಟೆ ಶಿಬಿರದಲ್ಲಿ ನಡೆದಿದೆ.
ಮದ್ದೂರು ಕಳ್ಳಬೇಟೆ ಶಿಬಿರದಲ್ಲಿ ಕಳೆದ 28 ವರ್ಷಗಳಿಂದ ಹೊರಗುತ್ತಿಗೆ ನೌಕರನಾಗಿ ಮಹೇಶ್(56) ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮದ್ದೂರು ಕಳ್ಳಬೇಟೆ ಶಿಬಿರದಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹೇಶ್ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮೃತ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರ ಮಹೇಶ್ ಅವರು ಕರ್ತವ್ಯದಲ್ಲಿ ಇದ್ದಾಗಲೇ ಸಾವನ್ನಪ್ಪಿದ್ದಾರೆ. ಅವರಿಗೆ ಪರಿಹಾರ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆದರೇ ಅರಣ್ಯ ಇಲಾಖೆಯ ನಿಯಮದಂತೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಮದ್ದೂರು ವಲಯ ಅರಣ್ಯಾಧಿಕಾರಿ ಕಚೇರಿಯ ಮುಂದೆ ಮೃತ ಮಹೇಶ್ ಶವವನ್ನಿರಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಮೃತರ ಸಂಖ್ಯೆ 3ಕ್ಕೆ ಏರಿಕೆ