Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಳೆದ 1 ವರ್ಷದಲ್ಲಿ ಅರಣ್ಯ ಇಲಾಖೆ ಆದಾಯ ಹೆಚ್ಚಳ: 1500 ಕೋಟಿ ರೂ.ಮೌಲ್ಯದ 2602 ಒತ್ತುವರಿ ತೆರವು
KARNATAKA

ಕಳೆದ 1 ವರ್ಷದಲ್ಲಿ ಅರಣ್ಯ ಇಲಾಖೆ ಆದಾಯ ಹೆಚ್ಚಳ: 1500 ಕೋಟಿ ರೂ.ಮೌಲ್ಯದ 2602 ಒತ್ತುವರಿ ತೆರವು

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, 2019-20ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ 263.41 ಕೋಟಿಯಿಂದ 2023-24ರ ಸಾಲಿನಲ್ಲಿ 417.84 ಕೋಟಿ ರೂ.ಗೆ ಹೆಚ್ಚಳವಾಗಿದೆ. 2023-24ನೇ ಸಾಲಿನಲ್ಲಿ ಅಧಿಸೂಚಿತ ಕಾಯ್ದಿಟ್ಟ ಅರಣ್ಯ (ಸೆಕ್ಷನ್ 17) ವ್ಯಾಪ್ತಿ 3395.73 ಹೆಕ್ಟೇರ್ ಅಂದರೆ ಸುಮಾರು 8300 ಎಕರೆಯಷ್ಟು ಹೆಚ್ಚಳವಾಗಿದ್ದರೆ, ರಕ್ಷಿತ ಅರಣ್ಯ ಪ್ರದೇಶ (ಸೆಕ್ಷನ್ 33) 184.52 ಹೆಕ್ಟೇರ್ ಅಂದರೆ 456 ಎಕರೆ ಹೆಚ್ಚಳವಾಗಿದೆ ಎಂದರು.

2600 ಎಕರೆ ಅರಣ್ಯ ಒತ್ತುವರಿ ತೆರವು

ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 3 ಎಕರೆಗಿಂತಲೂ ಕಡಿಮೆ ಭೂಮಿ ಮಾತ್ರ ಇರುವ ಬಡ ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಹಾಗೂ 3 ಎಕರೆಗಿಂತಲೂ ಹೆಚ್ಚು ಅರಣ್ಯ ಒತ್ತುವರಿ ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 371 ಪ್ರಕರಣಗಳಲ್ಲಿ ಸುಮಾರು 2602.30 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ತೆರವು ಮಾಡಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 1500 ಕೋಟಿ ರೂ. ಆಗುತ್ತದೆ ಎಂದರು.

ಕೋಲಾರದಲ್ಲಿ ಅತಿ ಹೆಚ್ಚು ಅಂದರೆ 1392.41 ಎಕರೆ ಅರಣ್ಯ ಜಮೀನು ಒತ್ತುವರಿ ತೆರವು ಮಾಡಿಸಲಾಗಿದೆ. ಮಡಿಕೇರಿಯಲ್ಲಿ 5ಎಕರೆ 50ಗುಂಟೆ ತೆರವು ಮಾಡಲಾಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ 17 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 500 ಕೋಟಿ ರೂ.ಗೂ ಅಧಿಕ ಎಂದು ತಿಳಿಸಿದರು.

5 ಕೋಟಿ ಸಸಿ

ಕಳೆದ ವರ್ಷ ವಿಶ್ವ ಪರಿಸರ ದಿನದಂದು ಘೋಷಿಸಿದಂತೆ 5ಕೋಟಿ 40ಲಕ್ಷ ಸಸಿಗಳನ್ನು ರಾಜ್ಯದಾದ್ಯಂತ ನೆಡಲಾಗಿದ್ದು, ಇವುಗಳ ಪೈಕಿ ಎಷ್ಟು ಬದುಕುಳಿದಿವೆ ಎಂದು ತಿಳಿಯಲು ಆಡಿಟ್ ಮಾಡಿ 3 ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಈ ಸಾಲಿನಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕಾಗಿ ಹೆಚ್ಚುವರಿಯಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದರು.

ಗುತ್ತಿಗೆ ಭೂಮಿ ವಶಕ್ಕೆ ಕ್ರಮ

ಕೊಡಗು, ಚಾಮರಾಜನಗರ, ಮೈಸೂರು ಭಾಗದಲ್ಲಿ ಸುಮಾರು 7500 ಎಕರೆ ಅರಣ್ಯ ಭೂಮಿಯನ್ನು ವಿವಿಧ ಕಂಪನಿಗಳಿಗೆ ಬ್ರಿಟಿಷರ ಕಾಲದಲ್ಲಿ ಗುತ್ತಿಗೆ ನೀಡಲಾಗಿದ್ದು, ಈ ಕಂಪನಿಗಳಿಂದ ಸುಮಾರು 2 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಅವಧಿ ಮುಗಿದ ಭೂಮಿ ಮರು ಪಡೆಯಲು ಕ್ರಮ ವಹಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು.

ವನ್ಯಜೀವಿ ಆವಾಸಸ್ಥಾನ ಅಭಿವೃದ್ಧಿಗೆ ಕ್ರಮ

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವನ್ಯಜೀವಿಗಳ ಆವಾಸಸ್ಥಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಲಾಂಟನಾ, ಸೆನ್ನಾ ಮೊದಲಾದ ಕಳೆಗಳನ್ನು ತೆಗೆಯುವುದು, ಹುಲ್ಲುಗಾವಲು ಅಭಿವೃದ್ಧಿ, ಜಲ ಮೂಲಗಳ ಅಭಿವೃದ್ಧಿಯೂ ಸೇರದೆ ಎಂದು ತಿಳಿಸಿದರು.

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ರೈಲ್ವೆ ಬ್ಯಾರಿಕೇಡ್, ಆನೆ ನಿರೋಧಕ ಕಂದಕ, ಸೌರ ತಂತಿಬೇಲಿ ಅಳವಡಿಕೆ ಕಾರ್ಯವನ್ನು ಆದ್ಯತೆಯ ಮೇಲೆ ನಿರ್ವಹಿಸಲಾಗುತ್ತಿದೆ. ಈವರೆಗೆ 332.62 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಗುರಿಯನ್ನು ಪೂರ್ಣಗೊಳಿಸಲಾಗಿದೆ. ಪ್ರಸ್ತುತ 101 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ವಿವರ ನೀಡಿದರು.

ಆನೆ, ಚಿರತೆ ಕಾರ್ಯಪಡೆ

ತಾವು ಸಚಿವರಾದ ತರುವಾಯ ಹಾಲಿ ಇರುವ 5 ಆನೆ ಕ್ಷಿಪ್ರ ಕಾರ್ಯಾಚರಣೆ ಪಡೆಗಳ ಜೊತೆಗೆ ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ 2 ಕಾರ್ಯಪಡೆ ಹಾಗೂ ಬೆಂಗಳೂರಿಗೆ ಸಮರ್ಪಿತವಾಗಿ ಒಂದು ಚಿರತೆ ಕಾರ್ಯಪಡೆ ರಚನೆ ಮಾಡಿದ್ದಾಗಿಯೂ ತಿಳಿಸಿದರು.

ಹೆಚ್ಚುವರಿ ರೈಲ್ವೆ ಬ್ಯಾರಿಕೇಡ್

ಕಾಡಾನೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ 324 ಕಿ.ಮೀ. ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವ ಅಗತ್ಯವಿದ್ದು, ಇದಕ್ಕಾಗಿ ವಾರ್ಷಿಕ 250 ಕೋಟಿ ರೂ. ಅನುದಾನದೊಂದಿಗೆ ಎರಡು ವರ್ಷದಲ್ಲಿ 500 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

BREAKING: ದೆಹಲಿ ಗಲಭೆ ಪ್ರಕರಣ: ‘ಉಮರ್ ಖಾಲಿದ್’ಗೆ ಜಾಮೀನು ನಿರಾಕರಿಸಿದ ಕೋರ್ಟ್ | Delhi Riots conspiracy case

BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.