ನವದೆಹಲಿ: ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆ ಬಗ್ಗೆ ನವದೆಹಲಿಯ ನನ್ನ ಗೃಹ ಕಚೇರಿಯಲ್ಲಿ ಕೇಂದ್ರ ಸರಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಾದ ವಿಭು ನಾಯರ್ ಅವರೊಂದಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮಹತ್ವದ ಸಮಾಲೋಚನೆ ನಡೆಸಲಾಯಿತು.
ಕರ್ನಾಟಕ ಸರಕಾರ ಈಗಾಗಲೇ ಸಲ್ಲಿಸಿರುವ ಪ್ರಸ್ತವಾವನೆಯಲ್ಲಿ ಕೆಲ ತಾಂತ್ರಿಕ ಲೋಪಗಳಿದ್ದು, ಅವುಗಳನ್ನು ಸರಿಪಡಿಸಿ ಪುನಹ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಿದರೆ ತಕ್ಷಣವೇ ಪರಿಗಣಿಸಿ ಪರಿಶೀಲಿಸುವುದಾಗಿ ಕಾರ್ಯದರ್ಶಿಗಳು ಭರವಸೆ ನೀಡಿದರು.
ಅಲ್ಲದೆ ಗೌರವಾನ್ವಿತ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಮತ್ತು ತಾವು ಸಲ್ಲಿಸಿರುವ ಮನವಿಗಳನ್ನೂ ಪರಿಗಣಿನೆಗೆ ತೆಗೆದುಕೊಂಡಿದ್ದೇವೆ ಎಂದು ಕೇಂದ್ರ ಸರಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಭು ನಾಯರ್ ಅವರು ಮಾಹಿತಿ ನೀಡಿದರು.
ಅಂದಹಾಗೇ ಕರ್ನಾಟಕದಲ್ಲಿರುವಂತ ಕಾಡುಗೊಲ್ಲ ಸಮುದಾಯದವರು ಬುಡಕಟ್ಟು ಸಂಸ್ಕೃತಿಯನ್ನು ಒಳಗೊಂಡಿದ್ದಾರೆ. ಅವರನ್ನು ಎಸ್ಟಿ ವರ್ಗಕ್ಕೆ ಸೇರಿಸಲು ಎಲ್ಲಾ ಅರ್ಹತೆ ಪಡೆಯಲಾಗಿದೆ ಎಂಬುದಾಗಿ ಕುಲಶಾಸ್ತ್ರೀಯ ಅಧ್ಯಯನವನ್ನೇ ನಡೆಸಿ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ವಿಸ್ತೃತ ವರದಿಯ ಪ್ರಸ್ತಾವನೆಯನ್ನು ಒಳಗೊಂಡಂತೆ, ಶಿಫಾರಸ್ಸು ಮಾಡಲಾಗಿತ್ತು. ಆದರೇ ಕೇಂದ್ರ ಸರ್ಕಾರ ಈ ಕೆಲ ತಾಂತ್ರಿಕ ಕಾರಣಗಳನ್ನು ನೀಡಿ ಪ್ರಸ್ತಾವನೆ ತಿರಸ್ಕರಿಸಿತ್ತು. ಇದೀಗ ಮತ್ತೆ ಪ್ರಸ್ತಾವನೆ ಸಲ್ಲಿಸಿದರೇ ಪರಿಗಣಿಸುವುದಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಭು ನಾಯರ್ ತಿಳಿಸಿದ್ದಾರೆ.
ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆ ಬಗ್ಗೆ ನವದೆಹಲಿಯ ನನ್ನ ಗೃಹ ಕಚೇರಿಯಲ್ಲಿ ಕೇಂದ್ರ ಸರಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀ ವಿಭು ನಾಯರ್ ಅವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು.
ಕರ್ನಾಟಕ ಸರಕಾರ ಈಗಾಗಲೇ ಸಲ್ಲಿಸಿರುವ ಪ್ರಸ್ತವಾವನೆಯಲ್ಲಿ ಕೆಲ ತಾಂತ್ರಿಕ… pic.twitter.com/BzP0CV5Owt
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 14, 2025
BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest