ಮಂಗಳೂರು; ಬಿಲ್ಲವ ಸಮುದಾಯದ ಒಂದು ಲಕ್ಷ ಹೆಣ್ಮಕ್ಕಳು ವೇಶ್ಯಯರಿದ್ದಾರೆ ಎಂಬುದಾಗಿ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರು ನೀಡಿದ್ದಂತ ಹೇಳಿಕೆ ವೈರಲ್ ಆಗಿತ್ತು. ಅಲ್ಲದೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಅವರನ್ನು ಸುಳ್ಯದ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಧರ್ಮದ ಬಿಲ್ಲವ ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸರು ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ಈ ಒಂದು ಹೇಳಿಕೆ ನೀಡಿದ್ದು ಅಧಿಕಾರಿಯ ಈ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿದ್ದರು.
ದೂರವಾಣಿಯಲ್ಲಿ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ಅಶ್ಲೀಲವಾಗಿ ಮಾತನಾಡಿದ್ದರು.
ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ತಕ್ಷಣ ಆತನನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದ್ದು, ಸಂಜೀವ ಪೂಜಾರಿ ಕಾಣಿಯೂರು ಹೇಳಿರುವ ಆಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೋ ವೈರಲ್ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್ ಠಾಣೆ ಸೇರಿದಂತೆ ಎರಡು ಕಡೆ ಪ್ರತ್ಯೇಕ ದೂರು ದಾಖಲಾಗಿತ್ತು. ಈ ಬೆನ್ನಲ್ಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ‘ಆಸ್ತಿ ಮಾಲೀಕ’ರಿಗೆ ಮಹತ್ವದ ಮಾಹಿತಿ: ಈ ಹಂತ ಅನುಸರಿಸಿ, ಅಂತಿಮ ‘ಇ-ಖಾತಾ’ ಪಡೆಯಿರಿ | E-Khata
BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಗ್ಗೆ HDK ಸ್ಪೋಟಕ ಹೇಳಿಕೆ