ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚನೆ ಮಾಡಿ ಸರ್ಕಾರ ಆದೇಶಿಸಿದೆ. ಈ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇಮಕ ಮಾಡಲಾಗಿದೆ.
ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ (2025ರ ಕರ್ನಾಟಕ ಕಾಯ್ದೆ ಸಂಖ್ಯೆ 35) ಪ್ರಕರಣ 09ರ ಉಪ ಪ್ರಕರಣ(1)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಕೆಳಗಿನಂತೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್, ಪದನಿಮಿತ್ತ ಸದಸ್ಯರನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಮಾರಿ ಶೋಭಾ ಕರಂದ್ಲಾಜೆ, ಸಚಿವ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಬಿಎಸ್ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ ನೇಮಕ ಮಾಡಲಾಗಿದೆ.
ಇವರಲ್ಲದೇ ಪದನಿಮಿತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರನ್ನಾಗಿ ಸಚಿವ ಜಮೀರ್ ಅಹ್ಮದ್ ಖಾನ್, ಲೋಕಸಭಾ ಸದಸ್ಯ ಡಾ.ಸಿಎನ್ ಮಂಜುನಾಥ್, ಪಿ ಸಿ ಮೋಹನ್, ತೇಜಸ್ವಿ ಸೂರ್ಯ, ರಾಜ್ಯ ಸಭಾ ಸದಸ್ಯ ನಾರಾಯಣ ಕೊರಗಪ್ಪ, ನಟ ಜಗ್ಗೇಶ್, ಜಿ.ಸಿ ಚಂದ್ರಶೇಖರ್, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಸೇರಿದಂತೆ 75 ಮಂದಿಯನ್ನು ನೇಮಿಸಲಾಗಿದೆ.
ಬೆಂಗಳೂರಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಹಿಂದಿನ ಸ್ಪೋಟಕ ರಹಸ್ಯ ಬಯಲು