ಬೆಂಗಳೂರು: ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.
ಇಂದು KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಮಹತ್ವದ ಘೋಷಣೆ ಘೋಷಣೆ ಮಾಡಿದರು. ಇದೇ ವೇಳೆ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುವುದು, ಹಾಗೂ ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ನೀಡಲಾಗುತ್ತದೆ ಅಂತ ತಿಳಿಸಿದರು. ಇದಕ್ಕೆ ವಾರ್ಷಿಕ 16 ಕೋಟಿ ರೂ. ವೆಚ್ಚವಾಗಲಿದ್ದು, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಅಂತ ಸಿಎಂ ತಿಳಿಸಿದರು.