ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಕಳೆದ 6 ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಸ್ವತಃ ಟ್ವೀಟ್ ಮಾಡುವ ಮೂಲಕ ಈ ಮಾಹಿತಿಯನ್ನು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಶೀಲ್ ಮೋದಿ, “ನಾನು ಕಳೆದ 6 ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ. ಈಗ ಜನರಿಗೆ ಹೇಳುವ ಸಮಯ ಬಂದಿದೆ ಎಂದು ನಾನು ಭಾವಿಸಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಎಲ್ಲವನ್ನೂ ಪ್ರಧಾನಿಗೆ ತಿಳಿಸಲಾಗಿದೆ. ದೇಶಕ್ಕೆ, ಬಿಹಾರ ಮತ್ತು ಪಕ್ಷಕ್ಕೆ ಯಾವಾಗಲೂ ಕೃತಜ್ಞರಾಗಿ ಮತ್ತು ಸಮರ್ಪಿತರಾಗಿರುತ್ತೇನೆ ಅಂತ ಹೇಳಿದ್ದಾರೆ.
पिछले 6 माह से कैंसर से संघर्ष कर रहा हूँ । अब लगा कि लोगों को बताने का समय आ गया है । लोक सभा चुनाव में कुछ कर नहीं पाऊँगा ।
PM को सब कुछ बता दिया है ।
देश, बिहार और पार्टी का सदा आभार और सदैव समर्पित |— Sushil Kumar Modi (मोदी का परिवार ) (@SushilModi) April 3, 2024