ಬೆಂಗಳೂರು : ದೇಶ ವಿಭಜಿಸುವಂತಹ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮನೆಗೆ ಇಂದು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕೆ ಎಸ್ ಈಶ್ವರಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕಲು ಯತ್ನ ನಡೆದಿದ್ದು, ಬೆಂಗಳೂರಿನ ಚಕ್ರವರ್ತಿ ಬಡಾವಣೆಯಲ್ಲಿರುವ ಬಿಜೆಪಿ ಮಾಜಿ ಸಚಿವ ಈಶ್ವರಪ್ಪ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ, ದೇಶ ವಿಭಜನೆ ಹೇಳಿಕೆ ಕೊಡುವವರನ್ನು ಕೊಲ್ಲುವ ಕಾನೂನು ತರಬೇಕು ಗುಂಡಿಕ್ಕಿ ಕೊಲ್ಲವ ಕಾನೂನು ತರಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಕೆ ಎಸ್ ಈಶ್ವರಪ್ಪ ಹೇಳಿಕೆ ಖಂಡಿಸಿ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.ದೇಶವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ನಿನ್ನೇ ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಅವರ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ.ಈಶ್ವರಪ್ಪ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇದೀಗ ಪೊಲೀಸ್ ಭದ್ರತೆ ಒದಗಿಸಲಾಗಿದೆ.