ಬೆಂಗಳೂರು: ಇಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರು ನಿಧನರಾಗಿದ್ದಾರೆ. ಈ ಮೂಲಕ ಡೇವಿಡ್ ಸಿಮಿಯೋನ್ ಇನ್ನಿಲ್ಲವಾಗಿದ್ದಾರೆ.
ಈ ಕುರಿತಂತೆ ಸಂತಾಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು, ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಶೋಕ ಸಂದೇಶದಲ್ಲಿ, ವಿಧಾನ ಪರಿಷತ್ತಿನ ಸದಸ್ಯರಾಗಿ ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸಿರುವ ಡೇವಿಡ್ ಸಿಮಿಯೋನ್ ಮೂರು ವರ್ಷಗಳ ಕಾಲ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಹಾಗೂ ಸುಮಾರು ಒಂದೂವರೆ ವರ್ಷಗಳ ಕಾಲ ಹಂಗಾಮಿ ಸಭಾಪತಿಯಾಗಿ ಸದನವನ್ನು ಸಮರ್ಥವಾಗಿ ನಿರ್ವಹಿಸಿದ್ದನ್ನು ಬಸವರಾಜ ಹೊರಟ್ಟಿರವರು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ.
ಎಲ್ಲಾ ಜನಾಂಗಗಳ ಬಗೆಗೂ ಅತೀವ ಪ್ರೀತಿ , ಕಾಳಜಿ ಹೊಂದಿದ್ದ ಅವರು, ಉತ್ತರ ಕರ್ನಾಟಕ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಸೇರಿದಂತೆ ಎಲ್ಲಾ ರಂಗಗಳ ಅಭಿವೃದ್ದಿಗೆ ಅರ್ಹನಿಶಿ ಶ್ರಮಿಸಿರುವ ಡೇವಿಡ್ ಸಿಮಿಯೋನ್ ತಮ್ಮ ಸರಳತೆ ಹಾಗೂ ಸಜ್ಜನಿಕೆಯಿಂದ ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಬಸವರಾಜ ಹೊರಟ್ಟಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಡೇವಿಡ್ ಸಿಮಿಯೋನ್ ಅವರ ಅಗಲಿಕೆಯಿಂದ ಕನ್ನಡ ನಾಡು ಉತ್ತಮ ಸಮಾಜ ಸೇವಕ ಹಾಗೂ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿರುವ ಬಸವರಾಜ ಹೊರಟ್ಟಿ, ಡೇವಿಡ್ ಸಿಮಿಯೋನ್ ಅವರ ಅಪಾರ ಅಭಿಮಾನಿಗಳು, ಬಂಧು ಮಿತ್ರರು ಹಾಗೂ ಕುಟುಂಬ ವರ್ಗದವರಿಗೆ ಭಗವಂತ ಅವರ ಅಗಲಿಕೆಯ ದುಖಃವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ
BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು