ಇಸ್ಲಾಮಾಬಾದ್(ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಾಧೀಶರನ್ನು ಶುಕ್ರವಾರ ಮಸೀದಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಖರನ್ ಪ್ರದೇಶದ ಮಸೀದಿಯ ಹೊರಗೆ ಮುಹಮ್ಮದ್ ನೂರ್ ಮೆಸ್ಕಂಜೈ ಮೇಲೆ ದಾಳಿಕೋರರು ಗುಂಡು ಹಾರಿಸಿದ್ದಾರೆ. ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಕೊನೆಯುಸಿರೆಳೆದಿದ್ದಾರೆ ಎಂದು ಖರಾನ್ ಪೊಲೀಸ್ ವರಿಷ್ಠಾಧಿಕಾರಿ ಆಸಿಫ್ ಹಲೀಮ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನ್ಯಾಯಾಧೀಶರ ಸಾವಿಗೆ ಸಂತಾಪ ವ್ಯಕ್ತಪಡಿಸಿದ ಬಲೂಚಿಸ್ತಾನ್ ಮುಖ್ಯಮಂತ್ರಿ ಮೀರ್ ಅಬ್ದುಲ್ ಕುದೂಸ್ ಬಿಜೆಂಜೊ ಅವರ ಸೇವೆಗಳು ಅವಿಸ್ಮರಣೀಯ ಎಂದು ಹೇಳಿದರು.
‘ಮೀನು ವ್ಯಾಪಾರಿ’ಯ ಅದೃಷ್ಟ ಖುಲಾಯಿಸಿದ ಲಾಟರಿ: ಸಾಲ ತೀರಿಸಲು ಮನೆ ಮಾರಲು ಹೊರಟವನಿಗೆ ’70 ಲಕ್ಷ ಜಾಕ್ ಪಾಟ್’
‘ಮೀನು ವ್ಯಾಪಾರಿ’ಯ ಅದೃಷ್ಟ ಖುಲಾಯಿಸಿದ ಲಾಟರಿ: ಸಾಲ ತೀರಿಸಲು ಮನೆ ಮಾರಲು ಹೊರಟವನಿಗೆ ’70 ಲಕ್ಷ ಜಾಕ್ ಪಾಟ್’
BIGG NEWS: ಸಿದ್ದರಾಮಯ್ಯ ಸಿಎಂ ಆಗೋಕೆ ನಾಲಾಯಕ್; ಕೆ.ಎಸ್ ಈಶ್ವರಪ್ಪ ವಾಗ್ದಾಳಿ