ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ ಹುಟ್ಟಿದ ಹಬ್ಬ ನಾಳೆಯಾಗಿದೆ. ಈ ಹಿನ್ನಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ, ಅವರ ಹುಟ್ಟಿದ ಹಬ್ಬವನ್ನು ಆಚರಿಸಲಿದ್ದಾರೆ.
ಈ ಬಗ್ಗೆ ಶಾಸಕರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದ ರಾಜಕಾರಣದ ಧ್ರುವತಾರೆ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ನವರ ಹುಟ್ಟುಹಬ್ಬ ದ ಪ್ರಯುಕ್ತ ದಿನಾಂಕ:-26-10-2025 ರಂದು ಬೆಳಗ್ಗೆ 10:30 ಕ್ಕೆ ಸಾಗರದ ಉಪವಿಭಾಗೀಯ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದಿದೆ.
ಇನ್ನೂ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂಬುದಾಗಿ ತಿಳಿಸಿದೆ.
ನಾಳೆ ಸೊರಬದ ಬಂಗಾರ ದಾಮದಲ್ಲಿ ನಮನ-ಚಿಂತನ ಸನ್ಮಾನ ಕಾರ್ಯಕ್ರಮ ಆಯೋಜನೆ
ದಿನಾಂಕ: 26-10-2025ರ ಭಾನುವಾರದ ನಾಳೆ ರಾಜ್ಯ ಕಂಡ ದೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ’ನವರ 93ನೇ ಹುಟ್ಟು ಹಬ್ಬದ ಅಂಗವಾಗಿ ಬೆಳಗ್ಗೆ-10.00 ಗಂಟೆಗೆ ಸರಿಯಾಗಿ ಸೊರಬದ ರಂಗಮಂದಿರ ಆವರಣದಲ್ಲಿ ನಮನ-ಚಿಂತನ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂಬುದಾಗಿ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಈ ಸಮಾರಂಭದಲ್ಲಿ ಸಚಿವರಾದಂತ ಕೆ.ಹೆಚ್ ಮುನಿಯಪ್ಪ, ಆರ್.ವಿ.ದೇಶಪಾಂಡೆ, ಸಂತೋಷ್ ಲಾಡ್, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಮಾರಂಭದ ಅಂಗವಾಗಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಅಮೋಘ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. ಅಲ್ಲದೇ ಸಂಜೆ 6.30 ಕ್ಕೆ ಸರಿಯಾಗಿ ಬಂಗಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. “ಆಳ್ವಾಸ್ ಸಂಸ್ಥೆ ವತಿಯಿಂದ ಸಾಂಸ್ಕ್ರತಿಕ ವೈಭವ” “ಆಳ್ವಾಸ್ ಸಂಸ್ಥೆ ವತಿಯಿಂದ ಸಾಂಸ್ಕ್ರತಿಕ ವೈಭವ” “ಆಳ್ವಾಸ್ ಸಂಸ್ಥೆ ವತಿಯಿಂದ ಸಾಂಸ್ಕ್ರತಿಕ ವೈಭವದ” ಅಮೋಘ ಜಾನಪದ ನೃತ್ಯ, ಭರತ ನಾಟ್ಯ ಹಾಗೂ ವಿವಿಧ ಕಲಾಪ್ರಕಾರಗಳ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು
ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು
BREAKING : ಬೆಂಗಳೂರಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರ : ರಾಜ್ಯ ಸರ್ಕಾರ & ‘GBA’ ಗೆ ಹೈಕೋರ್ಟ್ ನೋಟಿಸ್ ಜಾರಿ








