ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪೋಕ್ಸೋ ಕೇಸಲ್ಲಿ ಈಗ ಸಂಕಷ್ಟ ಎದುರಾಗಿದೆ. ಡಿಸೆಂಬರ್.2ರಂದು ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಪೋಕ್ಸೋ ಕೇಸಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ ತಡೆಯಾಜ್ಞೆ ತೆರವಾದ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಎಸ್ ಪಿ ಪಿ ಅಶೋಕ್ ನಾಯ್ಕ್ ಅವರು ಅರ್ಜಿಯನ್ನು ಒಂದನೇ ತ್ವರಿತ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ವೈ.ಎಂ ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಸೆಂಬರ್.2ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ.
ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ








