ಬೆಂಗಳೂರು: ಬಿಜೆಪಿ ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ದಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಮೋದಿಜೀ ಅವರ ಕೈಯನ್ನು ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷರಲ್ಲಿ ಕೇಳಿ ನಡೆಸುವ ನನ್ನ ಪ್ರವಾಸದ ವೇಳೆ ಮುಂಬರುವ ಚುನಾವಣೆ ದೃಷ್ಟಿಯಿಂದ ಪ್ರಮುಖರ ಜೊತೆ ಮಾತನಾಡುವೆ ಎಂದ ಅವರು, ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ವಿವರಿಸಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬಲು ಅವರು ಮನವಿ ಮಾಡಿದರು.
ಎಸ್‍ಸಿ ಮೋರ್ಚಾ ನೂತನ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜು, ಸಂಸದ ಮುನಿಸ್ವಾಮಿ, ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯದ ಮಾಜಿ ಉಪಾಧ್ಯಕ್ಷ ಇ.ಅಶ್ವತ್ಥನಾರಾಯಣ್, ಎಸ್‍ಸಿ ಮೋರ್ಚಾ ಹಿಂದಿನ ಅಧ್ಯಕ್ಷ ಮುನಿಕೃಷ್ಣ, ಮುಖಂಡರಾದ ಸಂಪಂಗಿ, ಬಾಲರಾಜು, ಚಿ.ನಾ.ರಾಮು, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕುಡಚಿ ರಾಜೀವ್ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.
BREAKING: ಕಾಂಗ್ರೆಸ್ ‘ಶಾಸಕ ಎಂ.ವೈ ಪಾಟೀಲ್’ ಕಾರು ಅಪಘಾತ: ಸಣ್ಣಪುಟ್ಟ ಗಾಯ, ಪ್ರಾಣಾಪಾಯದಿಂದ ಪಾರು