ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸ್ ಸಂಬಂಧ ಹೈಕೋರ್ಟ್ ವಿಚಾರಣೆಯನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ವಿಚಾರಣೆಯ ವೇಳೆಯಲ್ಲಿ ಮತ್ತಷ್ಟು ಕಾಲಾವಕಾಶವನ್ನು ಕೋರಿದ ಕಾರಣದಿಂದಾಗಿ ಹೈಕೋರ್ಟ್ ಏಕಸದಸ್ಯ ಪೀಠವು ಡಿಸೆಂಬರ್.12ಕ್ಕೆ ಮುಂದೂಡಿಕೆ.
ಅಂದಹಾಗೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಹೈಕೋರ್ಟ್ ಅವರನ್ನು ಬಂಧಿಸದಂತೆ ಆದೇಶಿಸಿತ್ತು. ಈ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.