ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸಲ್ಲಿ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ ಪೋಕ್ಸೋ ಕೇಸ್ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.27ಕ್ಕೆ ಮುಂದೂಡಿ, ರಿಲೀಫ್ ನೀಡಿದೆ.
ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸ್ ನಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ನಡೆಸಿತು. ಇಂದು ಕೂಡ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ಅಂದಹಾಗೇ ಸಹಾಯ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತಾಯಿ ಮಗಳು ಭೇಟಿ ನೀಡಿದ್ದಂತ ಸಂದರ್ಭದಲ್ಲಿ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದಾಗಿ ಆರೋಪಿಸಿ ಅವರ ತಾಯಿ ಮಾರ್ಚ್.14, 2024ರಂದು ದೂರು ನೀಡಿದ್ದರು. ಈ ದೂರು ಆಧರಿಸಿ ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.
BIG NEWS: ಪುಣೆಯಲ್ಲಿ ಕೆಲಸದ ಒತ್ತಡದಿಂದ 26 ವರ್ಷದ ಉದ್ಯೋಗಿ ಸಾವು: ತನಿಖೆಗೆ ಕೇಂದ್ರ ಸರ್ಕಾರ ಆದೇಶ
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs
‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್