ಹುಬ್ಬಳ್ಳಿ : ರಾಜ್ಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದು, ಪೆನ್ ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕ ಕೈವಾಡ ಇದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿಕೆ ಹಿಂದೆ ಕಾಂಗ್ರೆಸ್ ನ ಮಹಾನಾಯಕ, ಉಪಮುಖ್ಯಮಂತ್ರಿ ಕೈವಾಡವಿದೆ. ಪೆನ್ ಡ್ರೈವ್ ಹಂಚಿಕೆ ಮಾಡಿರುವುದು ಯಾರು ಅಂತ ಹೇಳಲಿ, ಪೆನ್ ಡ್ರೈವ್ ವಿಷಯ ಎಷ್ಟು ತಿಂಗಳ ಹಿಂದೆ ವಿಷ್ಯ ಗೊತ್ತಿತ್ತು? ಕಾಂಗ್ರೆಸ್ ಮಹಾನ್ ನಾಯಕ ದೊಡ್ಡ ಅಪರಾಧ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾನು ಎಂದೂ ಫಲಾಯಾನ ಮಾಡೋನು ಅಲ್ಲ. ಹೆಚ್.ಡಿ. ರೇವಣ್ಣ ಕುಟುಂಬದ ವಿಷ್ಯವನ್ನು ಕೆದಕಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಆಗ್ರಹಿಸಿದ್ದಾರೆ.