ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಅಪಮಾನಕರವಾಗುವ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಆದರೂ ತಾಯಂದಿರಿಗೆ ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನ ಕೊಟ್ಟಿದೆ. ಹಳ್ಳಿ ತಾಯಂದಿರು ದಾರಿ ತಪ್ಪಿದ್ದಾರೆ ಅಂತಾ ನಾನು ಹೇಳಿದ್ದೇನೆ ಅಂತಾ ಮಾಧ್ಯಮಗಳಲ್ಲಿ ಬರೆದಿದ್ದಾರೆ. ಆದರೆ ಮಹಿಳೆಯರೇ ನಿಮ್ಮ ಯಜಮಾನರ ಜೇಬಿನಿಂದ ಪಿಕ್ ಪಾಕೆಟ್ ಮಾಡಿ ಐದು ಸಾವಿರ ಕೊಡ್ತಾ ಇದ್ದಾರೆ. ಇದರಿಂದ ಎಚ್ಚೆತ್ತುಕೊಳ್ಳಿ ಅಂತಾ ಹೇಳಿದ್ದೇನೆ ಎಂದು ಹೇಳಿದರು.ಇದೇ ವೇಳೆ ಅವರು ಮಾತನಾಡಿ, ಸಾಲದ ಹೊರೆ, ರಾಜ್ಯದ ಆಸ್ತಿಯನ್ನ ಲೂಟಿ ಮಾಡ್ತಿದ್ದಾರೆ. ಅದಕ್ಕೆ ದಾರಿ ತಪ್ಪಬೇಡಿ ಅಂತಾ ಹೇಳಿದ್ದೀನಿ. ಮಹಿಳಾ ಆಯೋಗದಿಂದ ನೋಟಿಸ್ ಕೊಟ್ಟಿದ್ದಾರೆ. ಅವರಿಗೆ ಏನ್ ಹೇಳಬೇಕೋ ಹೇಳುತ್ತೇನೆ ಅಂಥ ಅವರು ಹೇಳಿದರು.