ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಸೂಪರ್ ಸ್ಪಶಾಲಿಟಿ ಆಸ್ಪತ್ರೆಗಾಗಿ ( Super Specialty Hospital ) ಜನತೆ ಟ್ವಿಟ್ಟರ್ ( Twitter ) ಮೂಲಕ ಅಭಿಯಾನ ಆರಂಭಿಸಿದ್ದಾರೆ. ಈ ಜನತೆಯ ಬೆಂಬಲಕ್ಕೆ ನಿಂತಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಕೂಡ ಸರ್ಕಾರಕ್ಕೆ ಜನತೆಯ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ.
BIG NEWS: ಇನ್ಮುಂದೆ ಪಿಡಿಓಗಳ ‘ಡಿಜಿಟಲ್ ಸಹಿ’ ಇಲ್ಲದ ಯಾವುದೇ ಪ್ರಮಾಣಪತ್ರಗಳು ಅಮಾನ್ಯ – ರಾಜ್ಯ ಸರ್ಕಾರ ಆದೇಶ
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವಂತ ಅವರು, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ @BJP4Karnataka ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು. 1/6
— H D Kumaraswamy (@hd_kumaraswamy) July 25, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ @BSBommai & ಆರೋಗ್ಯ ಸಚಿವ ಶ್ರೀ @mla_sudhakar ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ. 2/6
— H D Kumaraswamy (@hd_kumaraswamy) July 25, 2022
ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಹೇಳಿದ್ದಾರೆ.
ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ?
ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. 3/6— H D Kumaraswamy (@hd_kumaraswamy) July 25, 2022
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ ಎಂದು ಕಿಡಿಕಾರಿದ್ದಾರೆ.
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. 4/6
— H D Kumaraswamy (@hd_kumaraswamy) July 25, 2022
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರಕಾರ ಕಣ್ತೆರೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ @BJP4Karnataka ಸರಕಾರ ಕಣ್ತೆರೆಯಲೇಬೇಕು. 5/6
— H D Kumaraswamy (@hd_kumaraswamy) July 25, 2022
ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ #ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಹೇಳಿದ್ದಾರೆ.
ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ #ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ. 6/6
— H D Kumaraswamy (@hd_kumaraswamy) July 25, 2022