ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಜೆಡಿಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಿದ್ದಾರೆ.
BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ
ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ಇಂದು ದೇಶಪ್ರೇಮವನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿರುವ ಶಕ್ತಿಗಳೇ ಸ್ವಾತಂತ್ರ್ಯ ನಂತರ ದೇಶ ವಿಭಜನೆಗೆ ಕಾರಣವಾದವು, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಾಂಗ್ರೆಸ್ ಪಕ್ಷವೇ ಬೇರೆ, ಆದರೆ, ಈಗಿನ ಕಾಂಗ್ರೆಸ್ ನಕಲಿ ಕಾಂಗ್ರೆಸ್ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
BIGG NEWS : ಸ್ವಾತಂತ್ರ್ಯ ದಿನಾಚರಣೆ : ಕೊಡಗಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಧ್ವಜಾರೋಹಣ
ಬಿಜೆಪಿಯವರು ಒಂದು ಕಡೆ ನೆಹರೂ ಭಾವಚಿತ್ರ ಕಣ್ಮರೆ ಮಾಡುತ್ತಾರೆ. ಮತ್ತೊಂದು ಕಡೆ ಜವಹಾರಲಾಲ್ ನೆಹರು ರಾಷ್ಟ್ರ ವಿಭಜನೆ ಆಗಲು ಕಾರಣ ಅಂತ ನೆಪ ಹೇಳುತ್ತಾರೆ. ಅಂದು ಗಾಂಧೀಜಿ ಅವರನ್ನು ಕೊಲೆ ಮಾಡಿದವರೇ ದೇಶ ವಿಭಜನೆ ಆಗಲು ಕಾರಣ .ಅಂದು ಬಿಜೆಪಿಯ ಸಂಕುಚಿತ ಮನೋಭಾವದಿಂದಲೇ ದೇಶ ವಿಭಜನೆ ಆಗಲು ಕಾರಣ. ಇಂದು ನೋಡಿದರೆ ನೆಹರು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ ಕಿಡಿಕಾರಿದ್ದಾರೆ.