ರಾಮನಗರ : ಚಾಮುಂಡೇಶ್ವರಿ, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Big news: 200 ಕೋಟಿ ಕೋವಿಡ್ ಲಸಿಕೆ ಮೈಲಿಗಲ್ಲು ಸಾಧಿಸಿದ ಭಾರತ: ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ʻಬಿಲ್ ಗೇಟ್ಸ್ʼ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಬಹಳ ಜನ ಸಿಎಂ ಆಗುವ ಇಚ್ಛೆ ಹೊಂದಿದ್ದಾರೆ. ಆದರೆ ಭಗವಂತನ ಇಚ್ಛೆ ಬೇರೆ ಇದೆ. ತಾಯಿ ಚಾಮುಂಡೇಶ್ವರಿ, ಜನರ ಆಶೀರ್ವಾದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ, ಕಾಂಗ್ರೆಸ್ ನವರಿಗೆ ಸೋನಿಯಾ ಗಾಂಧಿ ಚಿಂತೆ, ಬಿಜೆಪಿಯವರಿಗೆ ಮೋದಿ ಚಿಂತೆ ಆದರೆ ಜೆಡಿಎಸ್ ಗೆ ರೈತರು ಮತ್ತು ಕನ್ನಡ ನಾಡಿನ ಬಗ್ಗೆ ಚಿಂತೆ, ಮುಂದಿನ ಉತ್ಸವಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಬರಲಿದ್ದಾರೆ. ಸಾಬರು ಹೇಳುವ ಮಾತು ಎಂದೂ ಸುಳ್ಳು ಆಗುವುದಿಲ್ಲ. ಕಾಂಗ್ರೆಸ್ ಪಕ್ಷ ವೈಕ್ತಿ ಉತ್ಸವ ಮಾಡುತ್ತಿದೆ. ಆದರೆ ಕುಮಾರಸ್ವಾಮಿ ಜಲೋತ್ಸವ ಮಾಡಿದರು ಎಂದರು.