ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿ ಅವರಿಗೆ ಇಂದು ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ತಿಳಿದುಬಂದಿದೆ.
ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಲಿದ್ದು, ಶಸ್ತ್ರಚಿಕಿತ್ಸೆ ಬಳಿಕ 2-3 ದಿನ ವಿಶ್ರಾಂತಿ ಪಡೆಯುವ ಕುಮಾರಸ್ವಾಮಿ ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.