ಮೈಸೂರು : ನನ್ನ ಮಗ ರಾಕೇಶ್ 2016 ರಲ್ಲಿ ಸತ್ತು ಹೋಗಿದ್ದಾನೆ. ರಾಕೇಶ್ ಸತ್ತು 8 ವರ್ಷವಾಗಿದೆ. ಈಗ ರಾಕೇಶ್ ಸಾವಿನ ಬಗ್ಗೆ ಮಾತನಾಡುವುದು ಮೂರ್ಖತನ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕಾಗಿ ಮಗ ರಾಕೇಸ್ ಸಾವಿನ ಬಗ್ಗೆ ಕುಮಾರಸ್ವಾಮಿ ಅವರು ಮಾತನಾಡುತ್ತಿದ್ದಾರೆ. ರಾಕೇಶ್ ಸತ್ತು 8 ವರ್ಷಗಳು ಆಗಿದೆ. ಈಗ ಯಾಕೆ ಅದರ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ. ಈ ವಿಚಾರ ಪ್ರಸ್ತಾಪ ಮಾಡುವುದು ಮೂರ್ಖತನ ಎಂದು ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಇನ್ನೂ ಚನ್ನಗಿರಿ ಪಟ್ಟಣದಲ್ಲಿ ಲಾಕ್ ಡೆತ್ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಚನ್ನಗಿರಿಯಲ್ಲಿ ನಡೆದಿರುವುದು ಲಾಕಪ್ ಡೆತ್ ಅಲ. ಆರೋಪಿಗೆ ಪಿಟ್ಸ್ ಬಂದಿತ್ತು. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರೊಳಗೆ ಆರೋಪಿ ಸಾವನ್ನಪ್ಪಿದ್ದಾನೆ. ಆದರೂಊ ಪ್ರಕರಣದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.