ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ. ಸದ್ಯ ಅವರು ಚನ್ನೈ ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಈ ಹಿನ್ನಲೆಯಲ್ಲಿ ಅವರನ್ನು ಒಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಇದೇ ವೇಳೆ ಅವರು ಚನ್ನೈನಿಂದ ಖಾಸಗಿ ವಿಮಾನದಲ್ಲಿ ನೇರವಾಗಿ ಬೆಂಗಳೂರಿಗೆ ಬರಲಿದ್ದು, ಇನ್ನೇರಡು ದಿನದಲ್ಲಿ ಅವರು ಲೋಕಸಭಾ ಚುನಾವಣೆಯ ಪ್ರಚಾರ ಕೆಲಸದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.