ಬೆಂಗಳೂರು: ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿರುವ ಡಾಲರ್ಸ್ ಕಾಲೊನಿ ನಿವಾಸದಲ್ಲಿ ರಾತ್ರಿ 10 ಗಂಟೆ ಅನಾರೋಗ್ಯಕ್ಕೆ ಈಡಾಗಿದ್ದರು, ಕೂಡಲೇ ಅವರನ್ನು ಹತ್ತಿರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಈ ನಡುವೆ ಉಮೇಶ್ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವರು ಕಂಬನಿ ಮಿಡಿದಿದ್ದು, ಉಮೇಶ್ ಕತ್ತಿಯವರ ಅಂತಿಮ ದರ್ಶನವನ್ನು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಕ್ಕೆ ತೆರಳಿ ಪಡೆದುಕೊಂಡರು.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ವರು ಅವರ ತಂದೆಗೂ ವಿಧಾನಸಭೆಯಲ್ಲಿ ಹೃದಯಘಾತವಾಗಿತ್ತು, ಮೂಲತಃ ಅವರು ರಾಮ ಹೆಗ್ಡೆಯವರ ಅನುಯಾಯಿಗಿದ್ದರು, ಅವರ ಜೊತೆಗಿನ ಒಡನಾಡವನ್ನು ನೆನಪಿಸಿಕೊಂಡು, ಮೃತರ ಆತ್ಮಕ್ಕೆ ಶಾಂತಿಕೋರಿದರು.